ದೇಶಎರಡು ದಿನಗಳ ಭೇಟಿಗಾಗಿ ದೆಹಲಿಗೆ ಆಗಮಿಸಿದ ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್
ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಎರಡು ದಿನಗಳ ಭೇಟಿಗಾಗಿ ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ. ಭೇಟಿ ವೇಳೆಯಲ್ಲಿ ದ್ವಿಪಕ್ಷೀಯ ಸಂಬಂಧ, ಅಪ್ಘಾನಿಸ್ತಾನದಲ್ಲಿ ಪರಿಸ್ಥಿತಿ, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕತೆ, ಇಂಡೋ- ಫೆಸಿಪಿಕ್ ಸೇರಿದಂತೆ ಮತ್ತಿತರ ವಿಚಾರ ಕುರಿತಂತೆ ಭಾರತದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.