ರಾಜ್ಯಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ: ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಹಾಸ್ಟೆಲ್ ಖಾಲಿ ಮಾಡುವಂತೆ ಸೂಚನೆ, ವಿದ್ಯಾರ್ಥಿಗಳ ಆಕ್ರೋಶ
ಜನವರಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 9 ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಲಾಗಿದ್ದು, ಇದಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಿಡಿಕಾರಿದ್ದಾರೆ.