ರಾಜ್ಯದಕ್ಷಿಣ ಕನ್ನಡ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದಿದ್ದ ಕಾರು; ಕೊಚ್ಚಿಹೋಗಿದ್ದ ಇಬ್ಬರು ಯುವಕರ ಶವ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ 250 ಮೀಟರ್ ದೂರದಲ್ಲಿ ಇಬ್ಬರ ಶವ ಪತ್ತೆಯಾಗಿದೆ.