ಯುವಕರ ಸಾವು

ದೇವನಹಳ್ಳಿ: ವ್ಹೀಲಿಂಗ್ ಹುಚ್ಚಾಟ; ಟ್ರಕ್‌ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರು ಸಾವು
ಬೆಳಗ್ಗೆ 9.30ರ ಸುಮಾರಿಗೆ ಪಾಷಾ ಮತ್ತು ಮನೋಜ್ ದೇವನಹಳ್ಳಿಯಿಂದ ‘ಎಚ್’ ಕ್ರಾಸ್ ಕಡೆಗೆ ಹೋಗುತ್ತಿದ್ದರು. ವೇಗವಾಗಿ ವ್ಹೀಲಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಮಾಣ ಹಂತದ ಸೇತುವೆಯಿಂದ ಕಾರು ಉರುಳಿ ಮೂವರ ಸಾವು: Google Maps ತನಿಖೆ!
ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಮದುವೆಗೆ ತೆರಳುತ್ತಿದ್ದ ಯುವಕರಿದ್ದ ಕಾರು ರಾಮಗಂಗಾ ನದಿಗೆ ಉರುಳಿಬಿದ್ದಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ಮಂಗಳವಾರ ಹೇಳಿದೆ.

ಕಲಬುರಗಿ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ, ಮೂವರು ಯುವಕರ ದಾರುಣ ಸಾವು
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎಂಬುವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಘಟನೆ ನಡೆದಿದೆ.

ಬರ್ತ್ ಡೇ ಆಚರಣೆಗೆ ಹೊರಟ ಯುವಕರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್ & ರನ್ಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್(17ವ), ಹರ್ಷ(18ವ) ಮೃತರು.

ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳ ಸಾವು: ಕುಟುಂಬಕ್ಕೆ ಪರಿಹಾರ ಚೆಕ್ ತಲುಪಿಸಿದ ನಟ ಯಶ್
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ದಿನ ಎತ್ತರದಲ್ಲಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಯುವಕರ ಕುಟುಂಬಕ್ಕೆ ನಟನ ಕಡೆಯಿಂದ ಪರಿಹಾರದ ಚೆಕ್ ತಲುಪಿದೆ.

ವಿಜಯಪುರ: ಕಾಲುವೆ ನೀರಿನಲ್ಲಿ ಮುಳುಗಿ ಇಬ್ಬರ ದುರ್ಮರಣ
ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ದೆಹಲಿ: ಹಳಿ ಮೇಲೆ ವಿಡಿಯೋ ಶೂಟಿಂಗ್ ಮಾಡುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಸಾವು
ರಾಷ್ಟ್ರ ರಾಜಧಾನಿ ದೆಹಲಿಯ ಕಾಂತಿ ನಗರ ಮೇಲ್ಸೇತುವೆ ಬಳಿಯ ರೈಲ್ವೆ ಹಳಿಗಳಲ್ಲಿ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕೋಲಾರ: ಭೀಕರ ರಸ್ತೆ ಅಪಘಾತ ಇಬ್ಬರು ಸವಾರರು ಸಾವು
ಬೈಕ್ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಡಿಕಣ್ಣೂರು ಕೆರೆ ಏರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿ, ಯುವಕ ಸಾವು
ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸಲ್ದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.

