ರಾಜ್ಯಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ
ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.