ರಾಜ್ಯಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ ಇಂದು; ಅಂತಿಮ ದರ್ಶನಕ್ಕೆ ಅವಕಾಶ; ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ
ಜಮ್ಮು - ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಮೊನ್ನೆ ಬುಧವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕ ಮೂಲ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್((Captain Pranjal) ಅವರ ಅಂತ್ಯಕ್ರಿಯೆ ಇಂದು ಶನಿವಾರ ನೆರವೇರಲಿದೆ.