ರಾಜ್ಯಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ತಮಿಳುನಾಡು ಬರೆದಿರುವ ಪತ್ರ ಕಾನೂನು ಬಾಹಿರ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.