ದೇಶರಾಜಕೀಯ ಮಾಡುವ ಸಮಯ ಇದಲ್ಲ, ವಲಸಿಗರನ್ನು ಕರೆದೊಯ್ಯಲು ಅನುಮತಿ ಕೊಡಿ: ಪ್ರಿಯಾಂಕಾ ಗಾಂಧಿ
ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಇದು ರಾಜಕೀಯ ಮಾಡುವ ಸಮಯ ಅಲ್ಲ. ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಬಸ್ ಗಳಿಗೆ ಅನುಮತಿ ನೀಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಒತ್ತಾಯಿಸಿದ್ದಾರೆ.