ರಾಜರಾಜೇಶ್ವರಿ ನಗರ ಉಪ ಚುನಾವಣೆ

ಸೊಸೆಯನ್ನು ಬೆಂಬಲಿಸುವಂತೆ ಡಿ. ಕೆ. ರವಿ ತಾಯಿ ಮನವಿ
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಪರ ರವಿ ತಾಯಿ ಗೌರಮ್ಮ ಮತಯಾಚಿಸಿದ್ದಾರೆ.

ನಾನು ಕಳೆದುಕೊಂಡಿರುವ ಅರಿಶಿನ, ಕುಂಕುಮವನ್ನು ಮತದ ರೂಪದಲ್ಲಿ ಭಿಕ್ಷೆ ನೀಡಿ: ಕುಸುಮಾ
ನಾನು ಐದು ವರ್ಷಗಳ ಹಿಂದೆ ಕಳೆದುಕೊಂಡಿರುವ ಅರಿಶಿನ-ಕುಂಕುಮವನ್ನು ಮತದ ಸ್ವರೂಪದಲ್ಲಿ ಭಿಕ್ಷೆಯಾಗಿ ನೀಡಿ. ನನ್ನ ಉಳಿದ ಬದುಕನ್ನು ನಿಮ್ಮ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ಕಷ್ಟದ ದಿನಗಳು ಕಾದಿವೆ- ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ
ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ರಾಜರಾಜೇಶ್ವರಿ ನಗರ ಉಪ ಚುನಾವಣೆಗಿನ್ನೂ ಅಭ್ಯರ್ಥಿ ಅಂತಿಮವಾಗಿಲ್ಲ: ಜೆಡಿಎಸ್
ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗಿತ್ತು. ಆದರೆ ಮೈತ್ರಿ ವಿಚಾರವನ್ನು ಜೆಡಿಎಸ್ ತಳ್ಳಿಹಾಕಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

