ದೇಶವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ಸಮಾರಂಭ; ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ರನ್ನು ಹೊಗಳಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು 'ಸ್ನೇಹಿತ' ಎಂದು ಕರೆದಿದ್ದಾರೆ. ರಾಜ್ಯದಲ್ಲಿ 'ರಾಜಕೀಯ ಜಗಳ' ನಡೆಯುತ್ತಿರುವಾಗಲೂ ಇಲ್ಲಿ ನಡೆದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.