ರಾಜ್ ಘಾಟ್

ಒಂದು ಶತಮಾನದ ನಂತರವೂ, ಗಾಂಧಿ ಮಾರ್ಗ ಪ್ರಸ್ತುತ: ರಾಜ್‌ಘಾಟ್‌ನಲ್ಲಿ ವಾಂಗ್‌ಚುಕ್ ಪ್ರತಿಪಾದನೆ!
ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಂಗ್‌ಚುಕ್, ಇತ್ತೀಚಿನ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಚಳುವಳಿ ಕುರಿತು ಪ್ರಸ್ತಾಪಿಸುತ್ತಾ, ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುವವರ ರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸಿದರು.

ನವದೆಹಲಿ: ರಾಜ್‌ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಸಿಸೋಡಿಯಾ
ಅಬಕಾರಿ ನೀತಿ ಹಗರಣ"ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿತು.

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ದ್ರೌಪದಿ ಮುರ್ಮು
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಮಳೆ ನಡುವೆ ಜಿ20 ವಿಶ್ವ ನಾಯಕರಿಂದ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು.

ವರುಣಾರ್ಭಟಕ್ಕೆ ದೆಹಲಿ ತತ್ತರ; ಯಮುನೆಯ ಉಗ್ರ ರೂಪ: ರಾಜ್ ಘಾಟ್ ಸಂಪೂರ್ಣ ಜಲಾವೃತ; ಸುಪ್ರಿಂ ಕೋರ್ಟ್ ಗೂ ನುಗ್ಗಿದ ನೀರು
ಯಮುನಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ರಾಷ್ಟ್ರ ರಾಜಧಾನಿ ತತ್ತರಿಸಿದೆ. ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದು, ನೀರು ಸುಪ್ರೀಂ ಕೋರ್ಟ್‌ವರೆಗೂ ತಲುಪಿದೆ.

ಎಎಪಿ ಶಾಸಕರ ಭೇಟಿ: 'ರಾಜ್ ಘಾಟ್' ಶುದ್ಧೀಕರಣ ಕಾರ್ಯಕ್ಕೆ ಬಿಜೆಪಿ ಕಾರ್ಯಕರ್ತರು ಮುಂದು
ಅಬಕಾರಿ ನೀತಿ ಸುತ್ತ ಎದ್ದಿರುವ ವಿವಾದಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸಲು ಆಮ್ ಆದ್ಮಿ ಪಕ್ಷದ ಮುಖಂಡರು ರಾಜ್ ಘಾಟ್ ಗೆ ಭೇಟಿ ನೀಡಿರುವುದಾಗಿ ಗುರುವಾರ ಹೇಳಿರುವ ಬಿಜೆಪಿ, ತನ್ನ ಕಾರ್ಯಕರ್ತರು ಗಂಗಾ ಜಲವನ್ನು ಸಿಂಪಡಿಸಿ ಮಹಾತ್ಮ ಗಾಂಧಿಯ ಸಮಾಧಿಯನ್ನು ಶುದ್ಧೀಕರಿಸಲಿದ್ದಾರೆ ಎಂದು ಹೇಳಿದೆ.

ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿಗೆ ದ್ರೌಪದಿ ಮುರ್ಮು ಗೌರವ ನಮನ: ಇನ್ನು ಕೆಲವೇ ಹೊತ್ತಿನಲ್ಲಿ ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ
ನೂತನವಾಗಿ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಒಡಿಶಾ ಮೂಲದ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಇಂದು ಸೋಮವಾರ ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ ಘಾಟ್, ಸದೈವ್ ಅಟಲ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜ್ ಘಾಟ್ ಗೆ ತೆರಳಿ ಮಹಾತ್ಮಗಾಂಧಿ ಸಮಾಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳ ಸದೈವ್ ಅಟಲ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು.

ರಾಜ್ ಘಾಟ್ ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ದಂಪತಿ!
ರಾಜ್ ಘಾಟ್ ಗೆ ತೆರಳಿದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

