ರಾಜ್ಯ ಪ್ರವಾಹ

ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಒತ್ತಾಯ
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ರಾಜ್ಯ ಪ್ರವಾಹ: ಮೃತರ ಸಂಖ್ಯೆ 48ಕ್ಕೆ ಏರಿಕೆ, 12 ಕಣ್ಮರೆ: ದಕ್ಷಿಣ, ಕರಾವಳಿ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 60 ವರ್ಷಗಳಲ್ಲೇ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ವಿವಿಧೆಡೆ ಉಂಟಾದ ನೆರೆಯಿಂದಾಗಿ ಮೃತರ ಸಂಖ್ಯೆ 48 ಕ್ಕೆ ಏರಿಕೆ ಆಗಿದೆ.

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋದ ಮನೆ, ಬೆಳೆ: ರೈತ ಆತ್ಮಹತ್ಯೆ
ಭೀಕರ ಪ್ರವಾಹದಲ್ಲಿ ಮನೆ, ಬೆಳೆ ಕೊಚ್ಚಿ ಹೋದರಿಂದ ಮನನೊಂದ ಚಿಕ್ಕೋಡಿ ತಾಲೂಕಿನ ಕಾಲೊಲ್ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭಾರಿ ವಾಹನಗಳ ಸಂಚಾರ ಶುರು
ಸಂಕೇಶ್ವರ ಮತ್ತು ನಿಪಾಣ್ಣಿಯಲ್ಲಿ ಕಳೆದ 12 ದಿನಗಳಿಂದ ಉಂಟಾಗಿದ್ದ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ.

'ಕುಮಾರಸ್ವಾಮಿ, ಅವರಪ್ಪನಿಗೆ ವಯಸ್ಸಾಗಿಲವೇ': ಕೆಎಸ್ ಈಶ್ವರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ

ನೆರೆ ಪರಿಹಾರದಲ್ಲಿ ರಾಜಕೀಯ ಮಾಡುವುದಿಲ್ಲ- ಡಿಕೆ ಶಿವಕುಮಾರ್
ನೆರೆ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ಪರಿಹಾರ ಕಾರ್ಯದಲ್ಲಿ ಪಕ್ಷ ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಟೇಕಾಫ್ ಆಗಿರುವ ಬಗ್ಗೆ ಯಡಿಯೂರಪ್ಪ ಮಾತನಾಡಲಿ- ಎಚ್ ಡಿ ಕುಮಾರಸ್ವಾಮಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನು ಕಂಡೂ ಯಾವುದೇ ಪ್ರತಿಕ್ರಿಯೆ ಹಾಗೂ ಭರವಸೆ ನೀಡದೆ ಸುಮ್ಮನೆ ಹಿಂತಿರುಗಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, 14 ಮಂದಿ ಕಣ್ಮರೆ
ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಆಗಸ್ಟ್ 1ರಿಂದಲೂ ಈವರೆಗೂ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆ ಆಗಿದೆ. 14 ಜನರು ಕಣ್ಮರೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಪ್ರವಾಹ ಪರಿಹಾರ: ರಾಯಚೂರು ಜಿಲ್ಲೆಯನ್ನು ಪರಿಗಣಿಸದ ಸರ್ಕಾರ
ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು ಸರ್ಕಾರ 100 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಆದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮದಂತೆ ರಾಯಚೂರು ಜಿಲ್ಲೆಯನ್ನು ಈ ಪಟ್ಟಿಗೆ ಸೇರಿಸಿಲ್ಲ.

