ರಾಜ್ಯ ಬಜೆಟ್ 2023

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ
ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯ ಬಜೆಟ್ 2023: ತೆರಿಗೆ ಹೆಚ್ಚಿಸುವ ಮೂಲಕ ಬೊಕ್ಕಸಕ್ಕೆ 1,62,500 ಕೋಟಿ ರೂಪಾಯಿ ಸಂಗ್ರಹಣೆಯ ಗುರಿ
ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು ಈ ಬಾರಿ ರಾಜ್ಯ ಬೊಕ್ಕಸ ತುಂಬಿಸಲು ಹಲವು ಕ್ಷೇತ್ರಗಳ ಮೇಲೆ ತೆರಿಗೆಯನ್ನು ಹೆಚ್ಚಿಸಿದ್ದಾರೆ.

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ: ಸಿಎಂ ಸಿದ್ದರಾಮಯ್ಯ
ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯ ಬಜೆಟ್ 2023: ಎಸ್‌ಸಿ/ಎಸ್‌ಟಿ, ಒಬಿಸಿ ಅಭಿವೃದ್ಧಿಗೆ ಹಲವು ಯೋಜನೆಗಳ ಘೋಷಣೆ
ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭಿವೃದ್ಧಿ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಗೆ ಅನುದಾನದ ಮಹಾಪೂರವನ್ನೇ ಹರಿಸಿದ್ದಾರೆ.

ರಾಜ್ಯ ಬಜೆಟ್ 2023: ಹಸಿರೀಕರಣಕ್ಕೆ 500 ಕೋಟಿ ರೂ.; ಮಾನವ-ಕಾಡಾನೆ ಸಂಘರ್ಷ ತಡೆಯಲು 120 ಕೋಟಿ ರೂ. ಮೀಸಲು
ರಾಜ್ಯದಲ್ಲಿ ಮಾನವ–ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು.

ರಾಜ್ಯ ಬಜೆಟ್ 2023: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ, ಚಿತ್ರರಂಗಕ್ಕೆ ಸಿಎಂ ಕೊಡುಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯ ಬಜೆಟ್ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮ!
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದ್ದು, ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ.

ರಾಜ್ಯ ಬಜೆಟ್ 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಂಪರ್ ಕೊಡುಗೆ!
ಬಜೆಟ್ ಮಂಡನೆಗೂ ಮುನ್ನವೇ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 24,166 ಕೋಟಿ ಘೋಷಿಸುವ ಮೂಲಕ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ; 26,954 ಕೋಟಿ ರೂ. ಜಿಎಸ್'ಟಿ ಕೊರತೆ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

