ರಾಜ್ಯಸರ್ಕಾರ

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ, ಹೆಚ್ಚಿದ ಆತಂಕ!
ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆಗಾಗಿ ಸಮಿತಿಯೊಂದನ್ನು ರಚಿಸುವುದಾಗಿ ರಾಜ್ಯ ಸರ್ಕಾರ ಹೇಳಿದ ಬೆನ್ನಲ್ಲೇ ನಾಗರಿಕ ಗುಂಪುಗಳು, ಮಾಜಿ ಕಾರ್ಪೋರೇಟರ್ ಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಬೊಕ್ಕಸ ತುಂಬಲು ಬಿಬಿಎಂಪಿ ಜಮೀನು ಮಾರಾಟ: ಕುಮಾರಸ್ವಾಮಿ
ಸರ್ಕಾರ ಖಜಾನೆಯನ್ನು ಭರ್ತಿಮಾಡಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕಳೆದ ವರ್ಷದ ಅತಿವೃಷ್ಠಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
ಕಳೆದ ವರ್ಷದ ಅತಿವೃಷ್ಟಿಗೆ ಸರ್ಕಾರದ ಖರ್ಚು ವೆಚ್ಚ, ಪರಿಹಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸರ್ಕಾರದಿಂದ ವಿವರ ಕೇಳಿದ್ದಾರೆ.

ಕಳಸಾ ಬಂಡೂರಿ ನಾಲಾ ಯೋಜನೆ: ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ರಾಜ್ಯಕ್ಕೆ ಕೇಂದ್ರ ಸರ್ಕಾರದ ಸೂಚನೆ
ರಾಜ್ಯ ಸರ್ಕಾರದ ಬಹುದಿನಗಳ ಹೋರಾಟದ ಫಲವಾಗಿ ಕಳಸಾ ಬಂಡೂರಿ ನಾಲಾ ಯೋಜನೆ ಸಂಬಂಧ ಸಂತಸದ ಸುದ್ದಿ ಹೊರಬಿದ್ದಿದ್ದು, ಅರಣ್ಯ ಇಲಾಖೆಯ ಅನುಮತಿ ನೀಡುವ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.

ಕೊರೋನಾ ತಡೆಗಾಗಿ ಕೈಗೊಂಡ ಖರ್ಚು-ವೆಚ್ಚಗಳು ಪಾರದರ್ಶಕವಾಗಿಲ್ಲ: ಶ್ವೇತಪತ್ರ ಹೊರಡಿಸಿ- ಸಿದ್ದು ಆಗ್ರಹ
ಕೊರೋನಾ ತಡೆಗಟ್ಟಲು ರಾಜ್ಯಸರ್ಕಾರ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು -ವೆಚ್ಚಗಳು ಪಾರದರ್ಶಕವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

'ಸಪ್ತಪದಿ' ಕಾರ್ಯಕ್ರಮದ ಮೂಹೂರ್ತ ಬದಲಿಸಿದ ಸರ್ಕಾರ
ಮುಜರಾಯಿ ಇಲಾಖೆಯ 'ಎ' ದರ್ಜೆ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ 'ಸಪ್ತಪದಿ' ಯೋಜನೆಗೆ ಕೊರೊನಾ ಸೂತಕ ತಂದಿದ್ದು, ಸರ್ಕಾರವಿವಾಹ ದಿನಾಂಕಗಳನ್ನು ಮುಂದೂಡಿದೆ.

ಪಾದರಾಯನಪುರ ಗಲಭೆ ಪುಂಡರನ್ನು ರಾಮನಗರಕ್ಕೆ ವರ್ಗಾವಣೆ, ಅನಾಹುತಗಳಾದರೆ ಸರ್ಕಾರವೇ ಹೊಣೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಎಚ್.ಡಿಕೆ- ಡಿ.ಸಿ.ತಮ್ಮಣ್ಣ ವಿರುದ್ಧ ಭೂ ಕಬಳಿಕೆ ಆರೋಪ: ವಿವರಣೆ ಕೇಳಿದ ಹೈಕೋರ್ಟ್
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ್ಮ ವಿರುದ್ಧ ಕೇತಗಾನಹಳ್ಳಿ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಸರ್ಕಾರ ಆದ್ಯತೆ ನೀಡಬೇಕು- ಲೋಕಾಯುಕ್ತ
ಕಬ್ಬು ಬೆಳೆಗಾರರ ಬಾಕಿ ಪಾವತಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.

