ರಾಜ್ಯಇಸ್ರೋ ಸ್ಪರ್ಧೆಯಲ್ಲಿ ವೈಷ್ಣವಿ ಪ್ರಥಮ: ಪ್ರಧಾನಿಯೊಂದಿಗೆ ಚಂದ್ರಯಾನ-2 ಇಳಿಯುವ ಕ್ಷಣ ವೀಕ್ಷಿಸಲು ಅವಕಾಶ
ಬೆಂಗಳೂರಿನ ಇಸ್ರೋ ಸಂಸ್ಥೆ ನಡೆಸಿದ ಸ್ಪರ್ಧೆಯಲ್ಲಿ ಸಿಂಧನೂರಿನ ಡಾಡಿಲ್ಸ್ ಕಾನ್ಸೆಪ್ಟ್ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ವೈಷ್ಣವಿ ಜಿ ನಾಗರಾಜ ಆಯ್ಕೆಯಾಗಿದ್ದು, ಸೆಪ್ಟೆಂಬರ್ 7 ರಂದು ಚಂದ್ರಯಾನ-2 ನೌಕೆ ಇಳಿಯುವ ಅಭೂತಪೂರ್ವ ಕ್ಷಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಕ್ಷಣೆ ಮಾಡಲಿದ್ದಾರೆ.