ರಾಯಭಾರಿ

ಇರಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?
ಭಾರತವು 2002ರ ಐಎಫ್‌ಎಸ್ ಅಧಿಕಾರಿಯಾಗಿದ್ದ ವಿಶ್ವೇಶ್ ನೇಗಿ ಅವರನ್ನು ಇರಾನ್‌ನ ಮುಂದಿನ ರಾಯಭಾರಿಯಾಗಿ ನೇಮಿಸಿದೆ. ಇರಾನ್‌ಗೆ ನೇಮಕಗೊಳ್ಳುವ ಮೊದಲು, ವಿಶ್ವೇಶ್ ನೇಗಿ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಕರಾವಳಿ-ಮಲೆನಾಡು ಪ್ರವಾಸೋದ್ಯಮ ಬ್ರಾಂಡ್ ಅಂಬಾಸಿಡರ್ ಆಗಿ ರಿಷಬ್ ಶೆಟ್ಟಿ ನೇಮಕ
ಕರಾವಳಿಯಲ್ಲಿ ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡು ಹಿಡಿಯಬೇಕು.

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ.

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ರಾಯಭಾರಿಯಾಗಿ MP Kangana Ranaut ನೇಮಕ
ನಟಿ ಮತ್ತು ಸಂಸದೆ ಕಂಗನಾ ರಣಾವತ್ ಅವರನ್ನು ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಇಲ್ಲಿ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಬ್ರಾಂಡ್ ರಾಯಭಾರಿಯಾಗಿ ನೇಮಿಸಲಾಗಿದೆ.

Soapಗೆ ಲಿಂಗಭೇದ ಇರುವುದಿಲ್ಲ; ರಾಯಭಾರಿಯಾಗಲು ನನಗೆ ಆಸಕ್ತಿಯಿಲ್ಲ, ಕನ್ನಡಿಗರನ್ನು ನೇಮಿಸಲಿ: ಯದುವೀರ್
ಅವರದ್ದೇ ಪಕ್ಷದ ನಟಿ ರಮ್ಯಾ ಅವರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕನ್ನಡಿಗರನ್ನೇ ರಾಯಭಾರಿ ಮಾಡಿದ್ದರೇ ಬ್ರಾಂಡಿನ ಮೌಲ್ಯ ಇನ್ನೂ ಹೆಚ್ಚಾಗುತ್ತಿತ್ತು ಎಂದು ಹೇಳಿದ್ದಾರೆ.

ಸೇಡು: ಭಾರತೀಯ ಹೈಕಮಿಷನ್ ಸಿಬ್ಬಂದಿಯನ್ನು ‘persona non grata’ ಎಂದು ಘೋಷಿಸಿದ ಪಾಕಿಸ್ತಾನ; 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚನೆ
ಭಾರತೀಯ ರಾಯಊಾರಿ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡಿರುವ ಪಾಕಿಸ್ತಾನ. ಅಲ್ಲಿ ತನ್ನ ನಿರ್ಧಾರವನ್ನು ತಿಳಿಸಿ, ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ 'ಕಾಂತಾರ' ನಟ ಕಿಶೋರ್ ರಾಯಭಾರಿ
ನಟ ಕಿಶೋರ್ ಕನ್ನಡ ಮಾತ್ರವಲ್ಲದೇ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಫಿಲ್ಮ್ ಫೆಸ್ಟಿವಲ್ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಸಾಧ್ಯವೇ ಇಲ್ಲ: ಎಂ.ಬಿ ಪಾಟೀಲ್
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ರಿಲಯನ್ಸ್ ಜಿಯೋ ಮಾರ್ಟ್ ಗೆ ಮಹೇಂದ್ರ ಸಿಂಗ್ ಧೋನಿ ಬ್ರ್ಯಾಂಡ್ ಅಂಬಾಸಿಡರ್
ರಿಲಯನ್ಸ್ ರಿಟೇಲ್‌ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್ ಪ್ಲೇಸ್‌ಗಳಲ್ಲಿ ಒಂದಾಗಿದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ.

