ರಾಷ್ಟ್ರಪತ್ನಿ ವಿವಾದ

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮಿತ್ ಶಾ
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿರುವ ಬೆನ್ನಲ್ಲೇ ಬಿಜೆಪಿ ಪಾಳೆಯದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

'ರಾಷ್ಟ್ರಪತ್ನಿ' ವಿವಾದ: ಅಧೀರ್ ರಂಜನ್ ಗೆ ಮಹಿಳಾ ಆಯೋಗ ನೋಟಿಸ್, ಕ್ರಮಕೈಗೊಳ್ಳುವಂತೆ ಸೋನಿಯಾಗೂ ಪತ್ರ
ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಗೆ ಮಹಿಳಾ ಆಯೋಗ ನೋಟಿಸ್ ನೀಡಿದ್ದು ಇದರ ಜೊತೆಗೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೋನಿಯಾ ಗಾಂಧಿಗೂ ಪತ್ರ ಬರೆಯಲಾಗಿದೆ.

