ರಾಷ್ಟ್ರೀಯ ಏಕತಾ ದಿನ

ಸರ್ದಾರ್ ಪಟೇಲರು ಇಡೀ ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸಲು ಬಯಸಿದ್ದರು, ಆದರೆ ಜವಹರಲಾಲ್ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ: ಪ್ರಧಾನಿ ಮೋದಿ
ಸ್ವಾತಂತ್ರ್ಯ ನಂತರ 550 ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳನ್ನು ಒಗ್ಗೂಡಿಸುವಲ್ಲಿ ಪಟೇಲ್ ಅವರ ನಾಯಕತ್ವವನ್ನು ಮೋದಿ ಶ್ಲಾಘಿಸಿದರು, ಸಾಧ್ಯವಾಗದ ಕೆಲಸ ಪಟೇಲ್ ಅವರಿಂದ ಸಾಧ್ಯವಾಯಿತು ಎಂದರು.

'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಬಾಯಿ ಪಟೇಲ್ ಜಯಂತಿ: ಗುಜರಾತ್ ನ ಏಕತೆ ಪ್ರತಿಮೆಗೆ ಪ್ರಧಾನಿ ಮೋದಿ ನಮನ
2014 ರಿಂದ ಅಕ್ಟೋಬರ್ 31ನ್ನು ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ಎಂದು ಆಚರಿಸಿಕೊಂಡು ಬರಲಾಗುತ್ತಿದ್ದು, "ಭಾರತದ ಉಕ್ಕಿನ ಮನುಷ್ಯ" ಎಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪರಂಪರೆಯನ್ನು ಆಚರಿಸುತ್ತದೆ.

ಮುಂದಿನ 25 ವರ್ಷಗಳು ದೇಶಕ್ಕೆ ಅತ್ಯಂತ ಪ್ರಮುಖ ವರ್ಷಗಳಾಗಿರಲಿವೆ: ಪ್ರಧಾನಿ ಮೋದಿ
ಭಾರತಕ್ಕೆ ಮುಂದಿನ 25 ವರ್ಷಗಳು ಅತ್ಯಂತ ಪ್ರಮುಖ ವರ್ಷಗಳಾಗಿರಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು.

ರಾಷ್ಟ್ರೀಯ ಏಕತಾ ದಿನ: ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಸೋಮವಾರ (ಅ.31) ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಏಕತಾ ಪ್ರತಿಮೆಗೆ ಭೇಟಿ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ದೇಶವನ್ನು ವಿಭಜಿಸಲು ಭಾರತ ವಿರೋಧಿ ಶಕ್ತಿಗಳ ಪ್ರಯತ್ನವನ್ನು ಸರ್ದಾರ್ ಪಟೇಲ್ ವಿಫಲಗೊಳಿಸಿದರು: ಅಮಿತ್ ಶಾ
ದೇಶವನ್ನು ವಿಭಜಿಸಲು ಭಾರತ ವಿರೋಧಿ ಶಕ್ತಿಗಳ ಪ್ರಯತ್ನಗಳ ಹೊರತಾಗಿಯೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ತಮ್ಮ ದೂರದೃಷ್ಟಿಯಿಂದ ಬಲಿಷ್ಠ ಮತ್ತು ಅಖಂಡ ಭಾರತದ ಕನಸನ್ನು ನನಸಾಗಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.

ರಾಷ್ಟ್ರೀಯ ಏಕತಾ ದಿವಸ್ ಆಚರಣೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಅಮಿತ್ ಶಾರಿಂದ ಮಾಲಾರ್ಪಣೆ
ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 146ನೇ ಜನ್ಮಜಯಂತಿಯಾಗಿದ್ದು, ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ನ ಕೇವಾಡಿಯಾದಲ್ಲಿರುವ ವಲ್ಲಭಭಾಯಿಯವರ 182 ಮೀಟರ್ ಎತ್ತರದ ಏಕತಾ ಮೂರ್ತಿಯ ಬಳಿ ತೆರಳಿ ಗೌರವ ಸಲ್ಲಿಸಿದ್ದಾರೆ.

ಶತಕೋಟಿ ಕೋವಿಡ್ ಲಸಿಕೆ ಪೂರೈಕೆಯ ಯಶಸ್ಸು ಭಾರತದ ಶಕ್ತಿ-ಸಾಮರ್ಥ್ಯವನ್ನು ಇಂದು ಜಗತ್ತಿಗೆ ತೋರಿಸಿದೆ: ಪ್ರಧಾನಿ ಮೋದಿ
ದೇಶದ 100 ಕೋಟಿ ಜನರಿಗೆ ಕೋವಿಡ್-19 ಲಸಿಕೆ ನೀಡುವ ಮೂಲಕ ಹೊಸ ಶಕ್ತಿಯೊಂದಿಗೆ ದೇಶ ಇಂದು ಮುನ್ನಡೆಯುತ್ತಿದೆ. ನಮ್ಮ ಲಸಿಕೆ ಕಾರ್ಯಕ್ರಮದ ಯಶಸ್ಸು ದೇಶದ ಶಕ್ತಿ-ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ.

