ವಿದೇಶಆರ್ಥಿಕ ಬಿಕ್ಕಟ್ಟು: ರಾಷ್ಟ್ರೀಯ ವಿಮಾನಯಾನ ಸಂಸ್ಥೆ PIA ಮಾರಾಟಕ್ಕೆ ಪಾಕಿಸ್ತಾನ ಮುಂದು
ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಪಾಕಿಸ್ತಾನ ತನ್ನ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಪಾಕಿಸ್ತಾನ ಇಂಟರ್ ನ್ಯಾಶನಲ್ ಏರ್ ಲೈನ್ಸ್ (PIA) ಬಹುಪಾಲು ಷೇರುಗಳನ್ನು ಮಾರಾಟ ಮಾಡಲು ಅಲ್ಲಿನ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಸರ್ಕಾರಿ ಅಧಿಕಾರಿಯನ್ನು ಉಲ್ಲೇಖಿಸಿ ಎಆರ್ವೈ ನ್ಯೂಸ್ ವರದಿ ಮಾಡಿದೆ.