ಕ್ರೀಡೆಚಿನ್ನಗೆದ್ದ ಮೀರಾಬಾಯಿ ಚಾನು ರಾಷ್ಟ್ರೀಯ ದಾಖಲೆ!
ಕೋಲ್ಕತ್ತಾದಲ್ಲಿ ನಡೆಯುತ್ತಿರುವ ನ್ಯಾಷನಲ್ ವೇಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಅವರು 49 ಕೆ.ಜಿ ವಿಭಾಗದಲ್ಲಿ 203 ಕೆ.ಜಿ ಬಾರ ಎತ್ತುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಳ್ಳುವ ಜತೆಗೆ ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಇನ್ನಷ್ಟು ಉತ್ತಮಪಡಿಸಿಕೊಂಡರು.