ರಾಹುಲ್ ಅನರ್ಹತೆ

ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹತೆ ನಂತರ ಮೊದಲ ಬಾರಿಗೆ ರಾಹುಲ್ ಗಾಂಧಿ ವಯನಾಡ್ ಭೇಟಿ
ಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ವಯನಾಡ್‌ಗೆ ಭೇಟಿ ನೀಡಲಿದ್ದಾರೆ. ವಯನಾಡ್ ಮಾಜಿ ಸಂಸದರಿಗೆ ಅದ್ಧೂರಿ ಸ್ವಾಗತ ನೀಡಲು ಯುಡಿಎಫ್ ಜಿಲ್ಲಾ ಸಮಿತಿ ನಿರ್ಧರಿಸಿದೆ.

ರಾಹುಲ್ ಗಾಂಧಿಗೆ ಮಿಂಚಿನ ವೇಗದಲ್ಲಿ ಅನರ್ಹತೆ, ಬಿಜೆಪಿ ಸಂಸದರಿಗೆ ಬೇರೆ ನೀತಿ: ಕೇಂದ್ರದ ದ್ವಿಮುಖ ನೀತಿ ಬಗ್ಗೆ ಖರ್ಗೆ ಕಿಡಿ
ರಾಹುಲ್ ಗಾಂಧಿ ಅವರನ್ನು ಮಿಂಚಿನ ವೇಗದಲ್ಲಿ ಅನರ್ಹಗೊಳಿಸಿದರೆ, ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುಜರಾತ್ ಸಂಸದರಿಗೆ ಮಾತ್ರ ಅದೇ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರದ ದ್ವಿಮುಖ ನೀತಿ ಬಗ್ಗೆ ಕಿಡಿಕಾರಿದರು.

ದೇಶವನ್ನು ಆಳುವುದು ಅವರ ಜನ್ಮಸಿದ್ಧ ಹಕ್ಕೆಂದು ರಾಹುಲ್ ಗಾಂಧಿ ನಂಬಿದ್ದಾರೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ರಾಹುಲ್ ಗಾಂಧಿ ಅವರು ನಿರ್ದಿಷ್ಟ ಕುಟುಂಬದಲ್ಲಿ ಜನಿಸಿದ ಕಾರಣ ದೇಶವನ್ನು ಆಳುವುದು ಅವರ ಜನ್ಮಸಿದ್ಧ ಹಕ್ಕು ಎಂದು ನಂಬಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ದೂರಿದ್ದಾರೆ.

ಪಾಶ್ಚಿಮಾತ್ಯರಿಗೆ ಇತರರ ವಿಷಯದಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ: ಅಮೆರಿಕಾ-ಜರ್ಮನಿ ವಿರುದ್ಧ ಜೈಶಂಕರ್ ಗರಂ
ಪಾಶ್ಚಿಮಾತ್ಯ ದೇಶಗಳು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆ ವಿಚಾರವಾಗಿ ಅಸ್ಸಾಂ ನಲ್ಲಿ 3 ಶಾಸಕರ ಅಮಾನತು!
ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಂಡಿರುವ ವಿಚಾರ ಅಸ್ಸಾಂ ನ ವಿಧಾನಸಭೆಯಲ್ಲೂ ಸದ್ದು ಮಾಡಿದ್ದು, 3 ಶಾಸಕರು ಅಮಾನತುಗೊಂಡಿದ್ದಾರೆ.

ಬಿಜೆಪಿ ವಿರುದ್ಧ ಕಿಡಿಕಾರಲು ಏಪ್ರಿಲ್ 5ರಂದು ರಾಹುಲ್ ಗಾಂಧಿ ರಾಜ್ಯ ಭೇಟಿ, ಅದೇ ಸ್ಥಳದಿಂದ ಮತ್ತೆ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕರ್ನಾಟಕದಲ್ಲಿ ಭಾಷಣ ಮಾಡಿದ ಸ್ಥಳದಿಂದಲೇ ಪ್ರತೀಕಾರ ತೀರಿಸಿಕೊಳ್ಳಲು ಕಾಂಗ್ರೆಸ್ ಏಪ್ರಿಲ್ 5 ರಂದು ಬೃಹತ್ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಕಾಂಗ್ರೆಸ್ ನಡೆಸುತ್ತಿರುವುದು ಸತ್ಯಾಗ್ರಹ ಅಲ್ಲ, ದುರಾಗ್ರಹ: ಕೈ ಪಾಳಯದ ವಿರುದ್ಧ ಬಿಜೆಪಿ ವಾಗ್ದಾಳಿ
ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಭಾನುವಾರದಂದು ಕೈ ಪಾಳಯ ನಡೆಸುತ್ತಿರುವ ಸತ್ಯಾಗ್ರಹವನ್ನು ದುರಾಗ್ರಹ ಎಂದು ಕರೆದಿದೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೆಹಲಿಯ ರಾಜ್‌ಘಾಟ್‌ನಲ್ಲಿ 'ಸಂಕಲ್ಪ ಸತ್ಯಾಗ್ರಹ' ನಡೆಸುತ್ತಿದೆ.

ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸತ್ಯಾಗ್ರಹ, ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು
ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಗ್ಗಟ್ಟಿನಿಂದ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲಿದೆ.

