ರಾಜಕೀಯತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ ಸುರೇಶ್ ಹೆಗಲಿಗೆ!
ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು