ವಿದೇಶಫಿಲಿಪೈನ್ಸ್ನಲ್ಲಿ 6.8 ತೀವ್ರತೆಯ ಭೂಕಂಪನ: ಕನಿಷ್ಠ ಏಳು ಮಂದಿ ಸಾವು
ಫಿಲಿಪೈನ್ಸ್ನ ದಕ್ಷಿಣ ಮಿಂಡಾನಾವೊ ದ್ವೀಪದಲ್ಲಿ ಭಾನುವಾರ ಸಂಭವಿಸಿದ 6.8 ತೀವ್ರತೆಯ ಭೂಕಂಪನದ ಪರಿಣಾಮವಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದಾವೊ ಡೆಲ್ ಸುರ್ ಪ್ರಾಂತೀಯ ವಿಪತ್ತು ಕಡಿತ ಮತ್ತು ನಿರ್ವಹಣಾ ಕಚೇರಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.