ರೇಣುಕಾಸ್ವಾಮಿ ಹತ್ಯೆ

ಸರ್ಜರಿ ಆಗದಿದ್ದರೆ ನಾಳೆಯೇ ಸಾಯುತ್ತಾರೆ, ಲಕ್ವ ಹೊಡೆಯುತ್ತದೆ ಎಂದಿದ್ದರು; 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ?
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಶ್ ಎಸ್. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದ ಏಕಸದಸ್ಯ ಪೀಠ ಶುಕ್ರವಾರ ಮುಂದುವರೆಸಿತು.

ದರ್ಶನ್ ಕೈದಿ ನಂ.6106: ಇದೇ ನಮಗೆ ಲಕ್ಕಿ ನಂಬರ್ ಎಂದ ಅಭಿಮಾನಿ, ರಿಜಿಸ್ಟರ್ ಮಾಡಿಸಲು ಮುಂದು!
ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ನಟ ದರ್ಶನ್‌ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್ 6106 ನನಗೆ ಲಕ್ಕಿ ನಂಬರ್ ಎಂದು ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ: ದರ್ಶನ್ ಗ್ಯಾಂಗ್‌ನಿಂದ 70 ಲಕ್ಷ ರೂ. ಜಪ್ತಿ; ತನಿಖೆಗೆ ಕೈಜೋಡಿಸುವಂತೆ ಐಟಿ ಇಲಾಖೆಗೆ ಪೊಲೀಸರ ಮನವಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯಲ್ಲಿ ತಮ್ಮೊಂದಿಗೆ ಕೈಜೋಡಿಸುವಂತೆ ಕರ್ನಾಟಕ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ; SPP ಬದಲಾವಣೆಗೆ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ: ಸಿಎಂ ಸಿದ್ದರಾಮಯ್ಯ
ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್ ಅವರನ್ನು ಬದಲಿಸುವಂತೆ ಯಾವುದೇ ಒತ್ತಡಗಳೂ ಬರುತ್ತಿಲ್ಲ. ಯಾವುದೇ ಸಚಿವರು, ಶಾಸಕರೂ ಒತ್ತಡ ಹಾಕಿಲ್ಲ, ಯಾವುದೇ ಒತ್ತಡಕ್ಕೂ ನಾವು ಮಣಿಯುವುದೂ ಇಲ್ಲ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಂದೆ ಅಂತ್ಯಕ್ರಿಯೆಯಲ್ಲಿ ಆರೋಪಿ ಅನುಕುಮಾರ್ ಭಾಗಿ!
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನುಕುಮಾರ್ ಅವರ ತಂದೆ ಚಂದ್ರಣ್ಣ ಅವರ ಅಂತ್ಯ ಸಂಸ್ಕಾರವನ್ನು ಇಲ್ಲಿನ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಇರುವ ರುದ್ರಭೂಮಿಯಲ್ಲಿ ಶನಿವಾರ ತಡರಾತ್ರಿ ನಡೆಸಲಾಯಿತು.

