ದೇಶಡಬ್ಲ್ಯೂಎಫ್ ಐ ಮುಖ್ಯಸ್ಥನ ಬಂಧನಕ್ಕೆ ಜೂನ್ 9 ರವರೆಗೂ ಗಡುವು, ತಪ್ಪಿದರೆ ಆಂದೋಲನ ಆರಂಭ: ರೈತ ನಾಯಕ ಟಿಕಾಯತ್
ದೇಶದ ಅತ್ಯುನ್ನತ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಡಬ್ಲ್ಯೂಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9ರೊಳಗೆ ಬಂಧಿಸಬೇಕು, ತಪ್ಪಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.