ರಾಜ್ಯರೈತ ಮುಖಂಡರಿಂದ ಕೇಂದ್ರ ಜಲಶಕ್ತಿ ಸಚಿವರ ಭೇಟಿ: ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಅಧ್ಯಕ್ಷ ಸೌಮಿತ್ರ ಕುಮಾರ್ ಹಲ್ದಾರ್ ಅವರನ್ನು ಸೋಮವಾರ ರಾಜ್ಯದ ರೈತ ಮುಖಂಡರು ಭೇಟಿ ಮಾಡಿದ್ದು, ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು.