ರಾಜ್ಯರೋಗಗ್ರಸ್ಥ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಎಂಟಿಬಿ ನಾಗರಾಜ್
ಕೋವಿಡ್ ಸಾಂಕ್ರಮಿಕದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿರುವ ಅಂಶವು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.