ರಾಜ್ಯರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿ
ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.