ರಾಜ್ಯಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ
ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಎಐಎಕ್ಸ್ ಕನೆಕ್ಟ್ ವಿಮಾನವು ಶನಿವಾರ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ 10 ನಿಮಿಷಗಳಲ್ಲಿಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್ ಏಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.