ದೇಶಲಖಿಂಪುರ್ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿಯನ್ನು ಇನ್ನೂ ಬಂಧಿಸದ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಪರಾಕಿ!
ಲಖಿಂಪುರ್ ಹಿಂಸಾಚಾರ ಪ್ರಕರಣದ ನಿರ್ವಹಣೆ ಕುರಿತಂತೆ ಅತೃಪ್ತಿ ವ್ಯಕ್ತಿಪಡಿಸಿದ ಸುಪ್ರೀಂ ಕೋರ್ಟ್ ಇಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದು ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿದರೂ ಆತನನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ.