ರಾಜ್ಯಬೆಂಗಳೂರು: ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ; ರೋಗಿ, ವೈದ್ಯ ಸೇರಿ ಮೂವರು ಸ್ಥಳದಲ್ಲಿಯೇ ದುರ್ಮರಣ
ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ, ವೈದ್ಯ ಸಹಿತ ಮೂವರು ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ನೆರಳೂರು ಗೇಟ್ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.