ರಾಜ್ಯಲಾಲ್ಬಾಗ್ ಫಲಪುಷ್ಪ ಪ್ರದರ್ಶನ ಉದ್ಘಾಟನೆ; ಬೆಂಗಳೂರಿನಲ್ಲಿ ಹಸಿರು ಪ್ರದೇಶ ಹೆಚ್ಚಿಸಲು 100 ಕೋಟಿ ರೂ.: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು 100 ಕೋಟಿ ಅನುದಾನ ನೀಡುತ್ತಿದ್ದೇವೆ. ಇನ್ನು ಮುಂದೆ ‘ಉದ್ಯಾನ ನಗರಿ’ ಶೀರ್ಷಿಕೆಗೆ ಹೊಂದುವ ಉದ್ಯಾನಗಳನ್ನು ಅಭಿವೃದ್ಧಿಪಡಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 213ನೇ ದ್ವೈವಾರ್ಷಿಕ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಹೇಳಿದರು.