ದೇಶಕೃಷಿ ತಿದ್ದುಪಡಿ ಕಾಯ್ದೆ ರದ್ದತಿ ಬಗ್ಗೆ ನಾವು ಸರ್ಕಾರದ ಚರ್ಚೆ, ವಿವರಣೆ ಕೇಳುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕಳೆದ ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಹಲವು ಘಟನೆಗಳ ಬಗ್ಗೆ ಚರ್ಚೆ ನಡೆಸಬೇಕೆಂದು ನಾವು ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.