ರಾಜ್ಯಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: 30ಕ್ಕೆ 'ಸುಪ್ರೀಂ' ವಿಚಾರಣೆ; ಹಿರಿಯ ವಕೀಲ ರೋಹಟಗಿ- ಬೊಮ್ಮಾಯಿ ಭೇಟಿ ಇಂದು
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಇದೇ ತಿಂಗಳ 30 ರಂದು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ.