ರಾಜ್ಯಪರೇಶ್ ಮೇಸ್ತ ಕೊಲೆ ಆರೋಪಿಗೆ ವಕ್ಫ್ ಮಂಡಳಿ ಹುದ್ದೆ; ತೀವ್ರ ವಿರೋಧ, ವ್ಯಾಪಕ ಮುಜುಗರದ ಬಳಿಕ ತಡೆ ನೀಡಿದ ಸರ್ಕಾರ
ಪರೇಶ್ ಮೇಸ್ತ ಸಾವಿನ ಪ್ರಕರಣದ ಪ್ರಮುಖ ಆರೋಪಿ ಜಮಾಲ್ ಆಜಾದ್ ಅಣ್ಣಿಗೇರಿಗೆ ಉತ್ತರ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿಯ ಉಪಾಧ್ಯಕ್ಷ ಸ್ಥಾನ ನೀಡಿ ಹೊರಡಿಸಿದ್ದ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ಕೇಳಿ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ತಡೆ ಹಿಡಿದಿದೆ.