ರಾಜ್ಯಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ, 27 ಕೋಟಿ ರೂ. ಮೌಲ್ಯದ ಮದ್ಯ ವಶ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.