ರಾಜ್ಯವಿಧಾನಸಭಾ ಚುನಾವಣೆ: ರಾಜ್ಯದಲ್ಲಿ ಒಟ್ಟು 305 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ
ರಾಜ್ಯ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿದಂತೆ ಎಲ್ಲ ತಂಡಗಳು ಒಟ್ಟು ರೂ. 305 ಕೋಟಿ ಮೌಲ್ಯದ ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.