ವಾರಾಂತ್ಯ ಕರ್ಫ್ಯೂ

ಗಡಿ ಜಿಲ್ಲೆಗಳಲ್ಲಿನ ವೀಕೆಂಡ್ ಕರ್ಫ್ಯೂ ರದ್ದು: ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ದರ ಹೀಗಿದೆ
ಸದ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಶೇಕಡಾ 2ಕ್ಕಿಂತ ಕಡಿಮೆ ಇರುವುದರಿಂದ ಆಯಾ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವುದು ಅಥವಾ ತೆಗೆದುಹಾಕುವುದನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ತಜ್ಞರ ಸಭೆಯಲ್ಲಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ
ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ನಡೆಯಲಿರುವ ತಜ್ಞರು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವೀಕೆಂಡ್ ಕರ್ಫ್ಯೂ ಯಶಸ್ವಿ,ಸದ್ಯದ ಮಾರ್ಗಸೂಚಿ ಮುಂದುವರಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ವೀಕೆಂಡ್ ಕರ್ಫ್ಯೂ ಎರಡನೇ ದಿನ ರಾಜ್ಯದಲ್ಲಿ ಯಶಸ್ವಿಯಾಗುತ್ತಿದೆ. ಜನರು ಸ್ವಯಂಪ್ರೇರಣೆಯಿಂದ ಓಡಾಟ ಕಡಿಮೆ ಮಾಡಿದ್ದು ಕೊರೋನಾ ಸೋಂಕು ತಡೆಗೆ ಇದರಿಂದ ಬಹಳಷ್ಟು ಸಹಕಾರಿಯಾಗಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಮುಂದುವರಿದ ವಾರಾಂತ್ಯ ಕರ್ಫ್ಯೂ: ಬಿಕೋ ಎನ್ನುತ್ತಿರುವ ರಸ್ತೆಗಳು, ಬೆಳಗ್ಗೆಯೇ ಖರೀದಿ ಮುಗಿಸಿದ ಜನರು
ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೇರಿರುವ ವಾರಾಂತ್ಯ ಕರ್ಫ್ಯೂ ಭಾನುವಾರ ಮುಂದುವರಿದಿದೆ.

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ರಾಜಧಾನಿ ದೆಹಲಿಯಲ್ಲಿ ಈಗ ಕೊರೋನಾ ನಾಲ್ಕನೇ ಅಲೆ ಎದ್ದು ತೀವ್ರವಾಗುತ್ತಿದೆ. ಈ ನಿಟ್ಟಿನಲ್ಲಿ ಸೋಂಕಿಗೆ ನಿಯಂತ್ರಣ ಹಾಕಲು ಶತಾಯಗತಾಯ ಪ್ರಯತ್ನಿಸುತ್ತಿರುವ ದೆಹಲಿ ಸರ್ಕಾರ ವಾರಾಂತ್ಯ ಕರ್ಫ್ಯೂ ಹೇರುತ್ತಿದೆ.

