ರಾಜ್ಯಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!
ವಿಜಯನಗರ ಜಿಲ್ಲೆ ಹಂಪಿಯಲ್ಲಿ ಜುಲೈ 13ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿ20 ಶೆರ್ಪಾ ಮೀಟ್ಗೆ ಆತಿಥ್ಯ ವಹಿಸಲು ಸಜ್ಜಾಗುತ್ತಿರುವಾಗಲೇ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ನಿಯಮಗಳನ್ನು ಗಾಳಿಗೆ ತೂರಿರುವ ಅಧಿಕಾರಿಗಳು ವಿವಿಧೆಡೆಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.