ವಿಜಯಾನಂದ ಕಾಶಪ್ಪನವರ್

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ ಅಮಾನತು
ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಸಚಿವನಾಗಿದ್ದೇನೆ, ಈಗೇನು ಮಾಡುತ್ತೀಯಪ್ಪಾ ಜಗದ್ಗುರು?
ನಿನ್ನ ನೈತಿಕ ಮಟ್ಟ ಎಲ್ಲಿದೆ? ನಾವು ತೊಟ್ಟ ಬಟ್ಟೆಗೆ ವಿಧೇಯರಾಗಿ ಇರಬೇಕು. ಆದರೆ ನೀನು ಧರಿಸಿದ ಕಾವಿ ಬಟ್ಟೆಗೆ ವಿಧೇಯನಾಗಿದ್ದೀಯಾ? ಸಮಾಜ ನಮಗೆ ಕೊಟ್ಟ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕು.

ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ
ಬಸವ ಜಯಮೃತ್ಯುಂಜಯ ಶ್ರೀ ಈಗ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ.

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ! Video
ಶಾಸಕರು ಮತ್ತು ಸಚಿವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ವಾಗ್ದಾಳಿ ನಡೆಸಿದ ಕಾಶಪ್ಪನವರ್, ಒಂದು ಟಿಕೆಟ್ ಕೊಡ್ತಾರೆ. ಮನೆಯವರನ್ನೆಲ್ಲಾ ಕರೆದುಕೊಂಡು ಹೋಗೊದು ಹೇಗೆ?

ಒಡಕು: ಪಂಚಮಸಾಲಿ ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ, ಒಪ್ಪದ ವಿಜಯಾನಂದ ಕಾಶಪ್ಪನವರ್' ರಾಜೀನಾಮೆ ಸಲ್ಲಿಕೆ
ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ.

ಯುಬಿ ಸಿಟಿ ಸ್ಕೈ ಬಾರ್ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಖುಲಾಸೆ
ಕಳೆದ 7 ವರ್ಷಗಳ ಹಿಂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ಯುಬಿ ಸಿಟಿಯಲ್ಲಿರುವ ಸ್ಕೈಬಾರ್ ನಲ್ಲಿ ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಆಪ್ತ ಸೋಮಶೇಖರ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ.

ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಹೈಕೋರ್ಟ್ ಛೀಮಾರಿ
ಇಬ್ಬರು ಪೇದೆಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಹಿನ್ನಡೆಯಾಗಿದೆ....

