ವಿದ್ಯಾರ್ಥಿಗಳು ಅಸ್ವಸ್ಥ

ಕೊಚ್ಚಿ: ವಿಷಾಹಾರ ಸೇವನೆಯಿಂದ 80 ವಿದ್ಯಾರ್ಥಿಗಳು ಅಸ್ವಸ್ಥ, NCC ಶಿಬಿರ ಬಂದ್!
ಶಿಬಿರದಲ್ಲಿ ಸುಮಾರು 600 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಪೈಕಿ 80 ವಿದ್ಯಾರ್ಥಿಗಳಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವುದಾಗಿ ಶಂಕಿಸಲಾಗಿದೆ.

ಬಿಹಾರ: ಪೂರ್ವ ಚಂಪಾರಣ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 150 ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 150 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್‌ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಿವಮೊಗ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ಬಳಿಕ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ: ಸತ್ತ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 80 ಶಾಲಾ ಮಕ್ಕಳು ಅಸ್ವಸ್ಥ
ಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ದೆಹಲಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ರಾಜಧಾನಿ ದೆಹಲಿಯ ನರೆಲಾ ಪ್ರದೇಶದ ಸರ್ಕಾರಿ ಶಾಲೆಯ ಸುಮಾರು 25 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

