ರಾಜಕೀಯವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ನಲ್ಲಿ 7 ಸ್ಥಾನಗಳಿಗೆ 100ಕ್ಕೂ ಹೆಚ್ಚು ಆಕಾಂಕ್ಷಿಗಳು!
ವಿಧಾನಸಭೆ ಸದಸ್ಯರಿಂದ ಚುನಾಯಿತರಾಗಲಿರುವ 11 ವಿಧಾನ ಪರಿಷತ್ ಸ್ಥಾನಗಳಿಗೆ ಮುಂದಿನ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಗೆಲ್ಲಬಹುದಾದ ಏಳು ಸ್ಥಾನಗಳಿಗೆ ಸುಮಾರು 100 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವುದರಿಂದ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಲಾಬಿ ತೀವ್ರಗೊಂಡಿದೆ. ಜೂನ್ 13 ರಂದು ಚುನಾವಣೆ ನಿಗದಿಯಾಗಿದೆ.