ವಿಧಾನಸಭೆ ಚುನಾವಣಾ ಫಲಿತಾಂಶ

ಚುನಾವಣಾ ಫಲಿತಾಂಶಗಳು ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತವೆ: ಬಿವೈ ವಿಜಯೇಂದ್ರ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಪಕ್ಷದ ಕರ್ನಾಟಕ ಘಟಕದ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾನುವಾರ ಹೇಳಿದ್ದಾರೆ.

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನ ಹೀನಾಯ ಸೋಲು ಸನಾತನದ ಶಾಪ: ಸ್ವಂತ ಪಕ್ಷದ ವಿರುದ್ಧ ಪ್ರಮೋದ್ ಕೃಷ್ಣಂ ಆಕ್ರೋಶ
ಹಿರಿಯ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮಹಾತ್ಮ ಗಾಂಧೀಜಿಯವರ ಮಾರ್ಗದಿಂದ ದೂರವಿಟ್ಟು ಮಾರ್ಕ್ಸ್ ಮಾರ್ಗದತ್ತ ಕೊಂಡೊಯ್ಯಲು ಕೆಲವರು ಮುಂದಾಗಿದ್ದಾರೆ ಎಂದರು.

ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು; ಚಳ್ಳಕೆರೆ ಟಿ ರಘುಮೂರ್ತಿಗೆ ಜಯ!
ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಅಥಣಿ- ಜಾರಿಬಿದ್ದ ಜಾರಕಿಹೊಳಿ: ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ; ಮಹೇಶ್ ಕುಮಟಳ್ಳಿಗೆ ಹೀನಾಯ ಸೋಲು
ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

ಫಲಿಸದ ತಾಯಿಯ ಕ್ಷೇತ್ರ ತ್ಯಾಗ: ತಂದೆಯ ಭದ್ರಕೋಟೆಯಲ್ಲೇ ಸೋತ ಮಗ; ಎಲ್ಲಿಯೂ ಸಲ್ಲದ ನಿಖಿಲ್ ಕುಮಾರಸ್ವಾಮಿ!
ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಪಕ್ಷ ಬೇರೆಯಾದ್ರೂ ಗೆದ್ದು ಬೀಗಿದ ಅಪ್ಪ-ಮಕ್ಕಳು!
ಪ್ರತಿ ವಿಧಾನಸಭೆ ಚುನಾವಣೆಯಂತೆ ಈ ಬಾರಿಯ ಚುನಾವಣೆಯಲ್ಲಿಯೂ ಮೂರು ಪಕ್ಷಗಳಲ್ಲಿ ಅಪ್ಪ-ಮಕ್ಕಳು ಸ್ಪರ್ಧಿಸಿದ್ದರು. ಅವರಲ್ಲಿ ಹಲವು ಮಂದಿ ಗೆಲುವು ಕಂಡಿದ್ದಾರೆ.

