ರಾಜ್ಯವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಂಚಿನ ಪ್ರತಿಮೆ ಅನಾವರಣ; ಸಿಎಂ ಬೊಮ್ಮಾಯಿ ಇಂದು ದೆಹಲಿಗೆ
ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ.ಸಿ.ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆಸಿ ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು.