ಕ್ರೀಡೆಟೋಕಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್
ಭಾರತದ ಮುಂಚೂಣಿ ಕುಸ್ತಿಪಟು ವಿನೇಶ್ ಫೋಗಾಟ್ ಅವರು 53 ಕೆ.ಜಿ ವಿಭಾಗದಲ್ಲಿ 2020ರ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮುಂದಿನ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ದೇಶದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ವಿನೇಶ್ ಭಾಜನರಾಗಿದ್ದಾರೆ.