ವಿನೋದ್ ದುವಾ

ನವದೆಹಲಿ: ಹಿರಿಯ ಪತ್ರಕರ್ತ ವಿನೋದ್ ದುವಾ ನಿಧನ
ಅನಾರೋಗ್ಯದಿಂದ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಪತ್ರಕರ್ತ ವಿನೋದ್ ದುವಾ ಶನಿವಾರ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಖ್ಯಾತ ಹಿರಿಯ ಪತ್ರಕರ್ತ ವಿನೋದ್ ದುವಾ ಆರೋಗ್ಯ ಸ್ಥಿತಿ ಗಂಭೀರ: ಐಸಿಯುಗೆ ದಾಖಲು
ವಿನೋದ್ ಅವರು ಈ ವರ್ಷದಾರಂಭದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿ ರೇಡಿಯೊಲಾಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಪತ್ನಿ ಕೊರೊನಾಗೆ ಬಲಿಯಾಗಿದ್ದರು.

