ವಿನೋದ್ ರಾಜ್

'ಯಾವುದೇ ಕಾರಣಕ್ಕೂ ದರ್ಶನ್ ಬಿಟ್ಟು ಕೊಡಬೇಡ ಕಂದ ಎಂದಿದ್ದರು ಅಮ್ಮ; ನಾನು ಈ ಸ್ಥಿತಿಯಲ್ಲಿ ನೋಡಬೇಕಿತ್ತಾ?'
ದರ್ಶನ್‌ಗೆ ಮೂಗಿನ ತುದಿಯಲ್ಲಿ ಕೋಪ ಇದೆ. ಈಗ ದರ್ಶನ್‌ಗೆ ಅಗ್ನಿ ಪರೀಕ್ಷೆ ಅಷ್ಟೇ. ನಮ್ಮ ತಾಯಿಗೆ ದರ್ಶನ್ ಮೇಲೆ ತುಂಬಾ ಪ್ರೀತಿ ಇತ್ತು. ಆಗ ಮಂಚದಲ್ಲಿ ಮಲಗಿದ್ದಾಗಲೂ ದರ್ಶನ್ ಬಗ್ಗೆಯೇ ಅಮ್ಮ ಮಾತನಾಡುತ್ತಿದ್ದರು.

ಬೆಂಗಳೂರು: ಹಿರಿಯ ನಟ ವಿನೋದ್ ರಾಜ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟಿ ದಿವಂಗತ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಇವರು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

'ಅಮ್ಮ ನೀರು ಕುಡಿದು ಪ್ರಾಣ ಬಿಟ್ಟರು, ಅಮ್ಮಾ ಅಂತ ಕೂಗಿದೆ, ನಮ್ಮ ಬಾಂಧವ್ಯಕ್ಕೆ ಏನು ಹೇಳೋದು'?: ವಿನೋದ್ ರಾಜ್
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ(85 ವ) ನಿನ್ನೆ ಶುಕ್ರವಾರ ಸಂಜೆ ಬೆಂಗಳೂರು ಹೊರವಲಯ ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಟಿ ಲೀಲಾವತಿ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.

ಲೀಲಮ್ಮನಂಥ ಅತ್ತೆ ಪಡೆಯುವುದಕ್ಕೆ ನಾನು ಮತ್ತು ಅವರಂಥ ಅಜ್ಜಿ ಪಡೆಯುವುದಕ್ಕೂ ನನ್ನ ಮಗ ಪುಣ್ಯ ಮಾಡಿದ್ದೇವೆ: ವಿನೋದ್ ರಾಜ್ ಪತ್ನಿ ಮಾತು
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರು ಬಾರದ ಲೋಕಕ್ಕೆ ಪಯಣ ಬೆಳೆಸಿ ಇಂದು ಭಾನುವಾರಕ್ಕೆ ಮೂರು ದಿನ ಕಳೆದಿದೆ. ಅಂತಿಮ ಕ್ರಿಯೆ ಕಾರ್ಯದಲ್ಲಿ ಅವರ ಪುತ್ರ ವಿನೋದ್ ರಾಜ್ ಪತ್ನಿ ವಿನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಮಣ್ಣಲ್ಲಿ ಮಣ್ಣಾದ ಕನ್ನಡದ ಹಿರಿಯ ನಟಿ ಲೀಲಾವತಿ!
ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆರವೇರಿದೆ.

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಪ್ರತಿಭಟನೆ: ಇಳಿ ವಯಸ್ಸಿನಲ್ಲೂ ಹೋರಾಟಕ್ಕಿಳಿದ ಹಿರಿಯ ನಟಿ ಲೀಲಾವತಿ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಲೀಲಾವತಿ ಒಂದು ಸತ್ಯ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು, ಹಾಗೆ ಆ ಇನ್ನೊಂದು ಸತ್ಯ ಒಪ್ಪಿಕೊಳ್ಳಿ: ಪ್ರಕಾಶ್ ಮೇಹು
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಮಗ ವಿನೋದ್ ರಾಜ್ ಮದುವೆಯಾಗಿರುವ ಸಂಗತಿ ಇಲ್ಲಿಯವರೆಗೂ ಯಾರೊಬ್ಬರಿಗೂ ಗೊತ್ತೇ ಇರಲಿಲ್ಲ. ಆದರೆ ,ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಸ್ಫೋಟಕ ಮಾಹಿತಿಯೊಂದನ್ನು ಬಹಿರಂಗಗೊಳಿಸಿದ್ದರು.

ಅಂತರಂಗ ಕೆದಕಬೇಡಿ: ಮಗ ವಿನೋದ್ ರಾಜ್ ಗೌಪ್ಯ ಮದುವೆ ಬಗ್ಗೆ ಹಿರಿಯ ನಟಿ ಲೀಲಾವತಿ ಹೇಳಿದ್ದೇನು?
ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಕುಮಾರ್ ಮದುವೆ ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಂಡಿದ್ದರು.

ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಗೆ ಮದುವೆಯಾಗಿ ವಯಸ್ಸಿಗೆ ಬಂದ ಮಗನಿದ್ದಾನೆಯೇ?: ನಿರ್ದೇಶಕನ ಪೋಸ್ಟ್ ವೈರಲ್
ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಗೆ ಸಂಬಂಧಿಸಿದಂತೆ ಒಂದು ಸೆನ್ಸೇಷನಲ್ ಸುದ್ದಿಯನ್ನು ನಿರ್ದೇಶಕ ಪ್ರಕಾಶ್ ರಾಜ್ ಮೆಹು ಎಂಬುವವರು ಸೋಷಿಯಲ್ ಮೀಡಿಯಾದಲ್ಲಿ ಹೊರಹಾಕಿದ್ದು ಇದರ ಸತ್ಯಾಸತ್ಯತೆ ಬಗ್ಗೆ ಲೀಲಾವತಿಯವರು ಮತ್ತು ಅವರ ಪುತ್ರ ವಿನೋದ್ ರಾಜ್ ಅವರೇ ಹೇಳಬೇಕಾಗಿದೆ.

