ರಾಜಕೀಯಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ ವಿಚಾರ: ಶಾಸಕರ ಅಭಿಪ್ರಾಯ ಸಂಗ್ರಹಿಸಿದ ದೆಹಲಿ ನಾಯಕರು
ಕರ್ನಾಟಕ ಬಿಜೆಪಿ ವಿರೋಧ ಪಕ್ಷದ ನಾಯಕ (LoP) ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿಯ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ವಿನೋದ್ ತಾವ್ಡೆ ಅವರು ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರು.