ದೇಶಹೆಚ್ಚಿನ ಹಣ ನೀಡಲು ನಿರಾಕರಿಸಿದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಬಾಯಿಗೆ ಮೂತ್ರ ವಿಸರ್ಜನೆ!
ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಸಾಲದಾತ ಮತ್ತು ಆತನ ಸಹಚರರು ದಲಿತ ಮಹಿಳೆಯೊಬ್ಬರನ್ನು ವಿವಸ್ತಗೊಳಿಸಿ, ಹಲ್ಲೆ ನಡೆಸಿ ಮತ್ತು ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.