ರಾಜ್ಯವಿಧಾನಸಭೆಯಲ್ಲಿ 2018-19ನೇ ಸಾಲಿನ ಲೆಕ್ಕಪರಿಶೋಧನಾ ಸಮಿತಿ ವರದಿ ಸೇರಿದಂತೆ ವಿವಿಧ ವಿಧೇಯಕಗಳ ಮಂಡನೆ
ರಾಜ್ಯದ ವಿಧಾನಮಂಡಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಭಾರತ ಲೆಕ್ಕ ನಿಯಂತ್ರಕರು ಹಾಗೂ ಮಹಾ ಲೆಕ್ಕ ಪರಿಶೋಧಕರು ನೀಡಿರುವ ವರದಿಗಳು, ಧನ ವಿನಿಯೋಗ ಹಾಗೂ ಹಣಕಾಸು ಲೆಕ್ಕಗಳ ಪರಿಶೋಧನಾ ವರದಿಗಳು, ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ, ಕೈಗಾರಿಕೆಗಳ ಸೌಲಭ್ಯ ತಿದ್ದುಪಡಿ ವಿಧೇಯಕ ಸೇರಿದಂತೆ ಹತ್ತಕ್ಕೂ ಹೆಚ್ಚು ವಿಧೇಯಕಗಳನ್ನ ವಿಧಾನಸಭೆಯಲ್ಲಿ ಮಂಡಿಸಲಾಯಿತು.